ಕರಾಟೆ: ಶ್ರೀ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Sri Ramakrishna High School: ತೆಂಕಿಲದ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ, ಈಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳು ಚಿನ್ನದ ಪದಕ್ಕೆ ಭಾಜನರಾಗಿದ್ದಾರೆ.

Aug 8, 2026 - 15:37
ಕರಾಟೆ: ಶ್ರೀ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತೆಂಕಿಲದ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ, ಈಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳು ಚಿನ್ನದ ಪದಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿಗಳಾದ ಸ್ಮೃತಿ ಕೆ (ಒಳಮೊಗ್ರು ಪ್ರವೀಣ್ ಪೂಜಾರಿ ಹಾಗೂ ತ್ರಿವೇಣಿ ಪುತ್ರಿ), ಲಾವಣ್ಯಾ ಕೆ ನಾಯಕ್ (ಮುಂಡೂರು ಲವಕುಮಾರ್ ಮತ್ತು ನಳಿನಾಕ್ಷಿ ನಾಯಕ್ ಪುತ್ರಿ), 9ನೇ ತರಗತಿಯ ಅಭೀಶ್ ರೈ (ಮಂದಾರ ಕುಂಬ್ರ ಸುಂದರ್ ರೈ ಮಂದಾರ ಹಾಗೂ ಮಲ್ಲಿಕಾ ಎಸ್ ರೈ ಪುತ್ರ), 8ನೇ ತರಗತಿ ವಿದ್ಯಾರ್ಥಿಗಳಾದ ಕುಶಿತ್ ಆರ್.ಎಂ (ಬಪ್ಪಳಿಗೆ ಎಂ ರಾಜು ಹಾಗೂ ಬಿ.ಮೇಘ ಪುತ್ರ), ಪವಿಶ್ರೀ ಆರ್ ಬಲ್ನಾಡು (ರಮೇಶ ಹಾಗೂ ಯಶೋಧಾ ಪುತ್ರಿ) & ಶೌರ್ಯ ಕೆ ಕುಳ (ಬಂಟ್ವಾಳ ಲೋಕೇಶ್ ಎಸ್ ಮತ್ತು ವಿಜಯಲಕ್ಷ್ಮಿ ಕೆ ಪುತ್ರ) ಮುಂದಿನ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.  

ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಅಜಿತ್ ಮಾರ್ಗದರ್ಶನ ನೀಡಿದ್ದಾರೆ. ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಹಾಗೂ ಪ್ರಭಾರ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.