ಕರಾಟೆ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿಯಿಂದ ರಾಷ್ಟ್ರಮಟ್ಟದ ಸಾಧನೆ
Karate: ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ ತೃತೀಯ ಸ್ಥಾನ ಪಡೆದು, ಸಾಧನೆ ಮಾಡಿದ್ದಾರೆ.
ಪುತ್ತೂರು: ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ ತೃತೀಯ ಸ್ಥಾನ ಪಡೆದು, ಸಾಧನೆ ಮಾಡಿದ್ದಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶ್ರೀ ಶಂಕರನಾರಾಯಣ ನಿವಾಸಿ ಕೆ.ವಿ.ಮಂಜುನಾಥ್ ಮತ್ತು ಭವ್ಯ ದಂಪತಿಯ ಪುತ್ರಿಯಾಗಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ. ಈ ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.