15,000 ಶಿಕ್ಷಕರ ಹುದ್ದೆ: ಇಂದಿನಿಂದ ಅರ್ಜಿ ಸಲ್ಲಿಕೆ ಶುರು

Karnataka: ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ 15,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

Aug 18, 2026 - 14:54
Aug 18, 2026 - 15:17
15,000 ಶಿಕ್ಷಕರ ಹುದ್ದೆ: ಇಂದಿನಿಂದ ಅರ್ಜಿ ಸಲ್ಲಿಕೆ ಶುರು

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ 15,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇಂದಿನಿಂದ (ಆ.18) ಶುರುವಾಗಲಿದೆ. ಸಂಜೆ 6 ಗಂಟೆ ನಂತರ, ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
 
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿವಿಯಿಂದ ಪಿಯುಸಿ ಹಾಗೂ ಪದವಿ ಶಿಕ್ಷಣ ಪೂರೈಸಿರಬೇಕು. ಇದರೊಂದಿಗೆ ಬಿ.ಎಡ್, ಡಿ.ಎಡ್ ಮತ್ತು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಉತ್ತೀರ್ಣರಾಗಿರಬೇಕು.
 
ವಯೋಮಿತಿ: ಸಾಮಾನ್ಯ ವರ್ಗದವರಿಗೆ 40 ವರ್ಷ, ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ವಿಶೇಷಚೇತನರಿಗೆ 45 ವರ್ಷಗಳನ್ನು ನಿಗದಿಪಡಿಸಲಾಗಿದೆ. 
 
ಸಂಬಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.41,300 ಆರಂಭಿಕ ವೇತನವಿರುತ್ತದೆ. 
 
ಅರ್ಜಿ ಸಲ್ಲಿಸಲು ಕಡೆ ದಿನ/ ಶುಲ್ಕ: ಸೆಪ್ಟೆಂಬರ್ 7ಕ್ಕೆ ಕೊನೆಯಾಗಲಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿಯವರಿಗೆ ರೂ.750 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.500 ಶುಲ್ಕ ನಿಗದಿಪಡಿಸಲಾಗಿದೆ. 
 
ಹೆಚ್ಚಿನ ಮಾಹಿತಿಗೆ https://schooleducation.karnataka.gov.in/ಗೆ ಸಂಪರ್ಕಿಸಿರಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.