750 ಭೂಮಾಪಕರ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Karnataka Land Surveyor Posts: ರಾಜ್ಯ ಸರ್ಕಾರವು 750 ಭೂಮಾಪಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸದ್ಯ, ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ.

Aug 6, 2026 - 13:22
Aug 6, 2026 - 14:07
750 ಭೂಮಾಪಕರ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರವು 750 ಭೂಮಾಪಕರ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸದ್ಯ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದ್ದು, ಆಗಸ್ಟ್ 20 ಕಡೆ ದಿನವಾಗಿದೆ. ಈ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ತುಂಬಲಾಗುತ್ತದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ ಅಥವಾ ಬಿಎಸ್ಸಿ ಉತ್ತೀರ್ಣರಾಗಿರಬೇಕು

ವಯೋಮಿತಿ: ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ: ಆಯ್ಕೆಯಾದವರಿಗೆ ತಿಂಗಳಿಗೆ ರೂ.37,500 ರಿಂದ ರೂ.76,100 ವೇತನ ದೊರೆಯುತ್ತದೆ.

ಅರ್ಜಿ ಶುಲ್ಕ: ಇದರ ಪಾವತಿಗೆ ಆಗಸ್ಟ್ 21 ಕೊನೆ ದಿನಾಂಕವಾಗಿದೆ. ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.