BREAKING: ಆಶಾ ಕಾರ್ಯಕರ್ತೆಯರಿಗೆ ರೂ.2,000 ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ

Karnataka: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಜನವರಿ 1 ರಿಂದ ಅನ್ವಯವಾಗುವಂತೆ ರೂ.2000 ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿರುವುದಾಗಿ ಮುಖಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Nov 28, 2026 - 18:03
Nov 28, 2026 - 18:05
BREAKING: ಆಶಾ ಕಾರ್ಯಕರ್ತೆಯರಿಗೆ ರೂ.2,000 ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಜನವರಿ 1 ರಿಂದ ಅನ್ವಯವಾಗುವಂತೆ ರೂ.2000 ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿರುವುದಾಗಿ ಮುಖಮಂತ್ರಿ ಡಿ.ಕೆ.ಶಿವಕುಮಾರ್‌ (Cm D.K.Shivakumar) ತಿಳಿಸಿದ್ದಾರೆ. 

ಕಳೆದ 12 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜತೆಗೆ ಶನಿವಾರ ನಡೆದ ಸಂಧಾನ ಸಭೆ ಬಳಿಕ, ಈ ಭರವಸೆಯನ್ನು ಸಿಎಂ ನೀಡಿದ್ದಾರೆ. 

ಆ ಮೂಲಕ ಕಳೆದ 12 ದಿನಗಳಿಂದ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತ್ರಿಭಟನೆ ಅಂತ್ಯಗೊಳಿಸಲು ನಿರ್ಧರಿಸಿದ್ದು, ಅವರ ಮನವೊಲಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. 

ಸಂಧಾನ ಸಭೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖಮಂತ್ರಿಗಳು, ಗೌರವ ಧನವನ್ನು ಹೆಚ್ಚಳ ಮಾಡುವಂತೆ ಆಶಾ ಕಾರ್ಯಕರ್ತೆಯರು ಕಳೆದ ಹಲವು ದಿನಗಳಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸಿ ಹೋರಾಟವನ್ನು ನಡೆಸುತ್ತಿದ್ದರು. ಅವರ ಬೇಡಿಕೆಗಳು ನ್ಯಾಯಯುತವಾಗಿ ಅವರ ನೋವುಗಳಿಗೆ ಸ್ಪಂದಿಸುವುದು ಸರ್ಕಾರ ಕರ್ತವ್ಯವಾಗಿದೆ ಎಂದರು.

ರಾಜ್ಯ ಸರ್ಕಾರದಿಂದ ಈಗಾಗಲೇ ತನ್ನ ಪಾಲಾಗಿರುವ ರೂ.5000 ನೀಡುತ್ತಿದೆ. ಕೇಂದ್ರ ಕೂಡ ಅಷ್ಟೇ ಪಾಲನ್ನು ನೀಡುತ್ತಿದೆ. ಆದರೆ, ಕಳೆದ 2-3 ವರ್ಷಗಳಿಂದ ಅವರ ವೇತನದಲ್ಲಿ ಹೆಚ್ಚಳವಾಗಿಲ್ಲ. ಗೌರವ ಧನವನ್ನು ಹೆಚ್ಚಳ ಮಾಡುವುದಾಗಿ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಜನವರಿಂದ ಅನ್ವಯವಾಗುವಂತೆ ರೂ.2,000 ಹೆಚ್ಚಳ ಮಾಡಲಾಗುವುದು. ಆ ಬಳಿಕ ಮುಂದಿನ ಬಜೆಟ್‌ನಲ್ಲಿ ಮತ್ತೆ ರೂ.2000 ಏರಿಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.