750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

Karnataka: Applications Invited For 750 Land Surveyor Posts: ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 750 ಭೂಮಾಪಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Jul 12, 2026 - 13:45
750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 750 ಭೂಮಾಪಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಶನಿವಾರದಿಂದ (ಜುಲೈ 11) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. 
 
ಈ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ತುಂಬಲಾಗುತ್ತದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ ಅಥವಾ ಬಿಎಸ್ಸಿ ಉತ್ತೀರ್ಣರಾಗಿರಬೇಕು.
 
ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ. 
 
ಆಯ್ಕೆಯಾದವರಿಗೆ ತಿಂಗಳಿಗೆ ರೂ.37,500 ರಿಂದ ರೂ.76,100 ವೇತನ ಲಭ್ಯವಾಗಲಿದೆ. 
 
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 7 ಕಡೆ ದಿನವಾಗಿದೆ. ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
 
ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಬಹುದು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.