Karnataka Bandh: ಕರ್ನಾಟಕ ಬಂದ್.. ಇಂದು ತೀರ್ಮಾನ
Karnataka Bandh: ಕರ್ನಾಟಕ ಬಂದ್ ನಡೆಸುವ ಬಗ್ಗೆ ಚರ್ಚಿಸಲು ಇಂದು (ಶುಕ್ರವಾರ) ಬೆಳಗ್ಗೆ 11.30ಕ್ಕೆ ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ಸೂಚಿಸಿದ್ದು, ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ಬಂದ್ ನಡೆಸುವ ಬಗ್ಗೆ ಚರ್ಚಿಸಲು ಇಂದು (ಶುಕ್ರವಾರ) ಬೆಳಗ್ಗೆ 11.30ಕ್ಕೆ ಮಹತ್ವದ ಸಭೆ ನಡೆಯಲಿದೆ.
ಖಾಸಗಿ ಹೋಟೆಲ್‌ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಕುರಿತು ಚರ್ಚೆಯಾಗಲಿದ್ದು, ಹೋರಾಟದ ರೂಪುರೇಶೆಗಳನ್ನು ನಿರ್ಧರಿಸುತ್ತದೆ. ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಸಾ.ರಾ.ಗೋವಿಂದು ಸೇರಿ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ.
ಸರ್ವಪಕ್ಷಗಳ ಸಭೆ:
ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಎತ್ತಿ ಹಿಡಿದೆ. ಮುಂದಿನ ಕ್ರಮದ ಕುರಿತು ಚರ್ಚಿಸಲು ರಾಜ್ಯ ಸರ್ಕಾರವು ಸರ್ವಪಕ್ಷ ಸಭೆಗಳ ಕರೆದಿದೆ.
ಇಂದು ಬಿಜೆಪಿ ಪ್ರತಿಭಟನೆ:
ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ, ಇಂದು ಬೆಳಗ್ಗೆ 10.30ಕ್ಕೆ ಶ್ರೀರಂಗಪಟ್ಟಣದ ಕೆಆರ್‌ಎಸ್ ಡ್ಯಾಂ ಬಳಿ ರಾಜ್ಯ ಬಿಜೆಪಿ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಈ ಮುಷ್ಕರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಮಂಡ್ಯದಲ್ಲಿ ತೀವ್ರ ಹೋರಾಟ:
ನಗರದಲ್ಲಿ ಗುರುವಾರ ರೈತಪರ ಹಾಗೂ ಕನ್ನಡಪರ ಸಂಘಟನೆಗಳು ಭಾರೀ ಪ್ರತಿಭಟನೆ ನಡೆದಿವೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯ ನಗರದ ಟಿಪಿ ವೃತ್ತ, ಸಂಜಯ ವೃತ್ತಿಮೆ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.