ಕರ್ನಾಟಕ: ತಂಬಾಕು, ನಿಕೋಟಿನ್ ಮಾರಾಟಕ್ಕೆ 1 ವರ್ಷ ನಿಷೇಧ

Karnataka: ಕರ್ನಾಟಕದಾದ್ಯಂತ 1 ವರ್ಷದ ಕಾಲ, ತಂಬಾಕು & ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಸೇರಿದಂತೆ ನಿಷೇಧಿತ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಲಾಗಿದೆ.

Aug 12, 2026 - 16:19
ಕರ್ನಾಟಕ: ತಂಬಾಕು, ನಿಕೋಟಿನ್ ಮಾರಾಟಕ್ಕೆ 1 ವರ್ಷ ನಿಷೇಧ

ಬೆಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
 
ಕರ್ನಾಟಕದಾದ್ಯಂತ 1 ವರ್ಷದ ಕಾಲ, ತಂಬಾಕು & ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಸೇರಿದಂತೆ ನಿಷೇಧಿತ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಿದೆ. ಆದಾಗ್ಯೂ, ಅವುಗಳ ಸೇವನೆ ಮೇಲೆ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ.

ಇದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ 'ಆಹಾರ ಸುರಕ್ಷತಾ ವಿಭಾಗ'ದಿಂದ ಜಾರಿಯಾಗಿದ್ದು, ಆಗಸ್ಟ್ 10 ರಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ.  

ಆಹಾರ ಸುರಕ್ಷತೆ ಮತ್ತು ಮಾನದಂಡ ಕಾಯ್ದೆ 2006ರ ಸೆಕ್ಷನ್ 30(2)(ಎ) & ಆಹಾರ ಸುರಕ್ಷತೆ ಹಾಗೂ ಮಾನದಂಡ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಗಳಡಿ ಈ ಕ್ರಮ ಕೈಗೊಳ್ಳಲಾಗಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.