Karnataka Cabinet Meeting: ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ ಸರ್ಕಾರ

Karnataka Cabinet Meeting: ರಾಜ್ಯ ಸರ್ಕಾರವು 'ತುಳು ಭಾಷೆ'ಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಮಾಡುವುದಕ್ಕೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.

Sep 18, 2026 - 16:24
Sep 18, 2026 - 17:11
Karnataka Cabinet Meeting: ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ ಸರ್ಕಾರ

ಮಂಗಳೂರು: ರಾಜ್ಯ ಸರ್ಕಾರವು 'ತುಳು ಭಾಷೆ'ಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಮಾಡುವುದಕ್ಕೆ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅವರ ನೇತೃತ್ವದಲ್ಲಿ, ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ. 

ಈ ಬಗ್ಗೆ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸ್ವತಃ ಸಿಎಂ ಡಿಕೆಶಿ ಅವರೇ ಮಾಹಿತಿ ನೀಡಿದ್ದಾರೆ. ತುಳು ಭಾಷೆಯನ್ನು ಕರಾವಳಿ ಭಾಗದಲ್ಲಿ ಪ್ರಮುಖ ಭಾಷೆಯಾಗಿ ಜನರು ಮಾತನಾಡುತ್ತಿದ್ದು, ಈ ಭಾಷೆಯ ಪ್ರಾಮುಖ್ಯತೆಯನ್ನು ಪರಿಗಣಿಸಿ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಜನರ ಅಭಿಪ್ರಾಯವನ್ನು ಕೂಡ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಹೆಸರಿಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ, ಜನಾಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ದಕ್ಷಿಣ ಕನ್ನಡ ಹೆಸರು ಈ ಹಿಂದೆ ಯಾವಾಗ ಹೇಗೆ ಬಂತು ಎಂಬುದರ ಬಗ್ಗೆ ಚರ್ಚೆ ಮಾಡಲ್ಲ ಎಂದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.