Vande Bharat Express: ಕರಾವಳಿಯ ಮೊಟ್ಟ ಮೊದಲ 'ವಂದೇ ಭಾರತ್‌ ಎಕ್ಸ್‌ಪ್ರೆಸ್'ಗೆ ಚಾಲನೆ

Vande Bharat Express: ಕರಾವಳಿ ಭಾಗದ ಮೊಟ್ಟ ಮೊದಲ 'ವಂದೇ ಭಾರತ್‌ ಎಕ್ಸ್‌ಪ್ರೆಸ್'ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಶುಕ್ರವಾರ ಚಾಲನೆ ನೀಡಿದರು.

Nov 13, 2026 - 17:45
Nov 13, 2026 - 17:45
Vande Bharat Express: ಕರಾವಳಿಯ ಮೊಟ್ಟ ಮೊದಲ 'ವಂದೇ ಭಾರತ್‌ ಎಕ್ಸ್‌ಪ್ರೆಸ್'ಗೆ ಚಾಲನೆ

ದಕ್ಷಿಣ ಕನ್ನಡ: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಕರಾವಳಿ ಭಾಗದ ಮೊಟ್ಟ ಮೊದಲ 'ವಂದೇ ಭಾರತ್‌ ಎಕ್ಸ್‌ಪ್ರೆಸ್'ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಶುಕ್ರವಾರ ಚಾಲನೆ ನೀಡಿದರು.

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಈ ರೈಲಿಗೆ ಹಸಿರು ನಿಶಾನೆ ತೋರಿಸಿದರು.  

ಸಂಸದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್ ಹಾಗೂ ಡಾ.ಭರತ್ ಶೆಟ್ಟಿ ಸೇರಿದಂತೆ ಇತರರು ಇದ್ದರು. 

ಯಶವಂತಪುರ-ಮಂಗಳೂರು-ಮಡಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್ ವಿಶೇಷತೆಗಳೇನು: 

ಬೆಂಗಳೂರಿನ ಯಶವಂತಪುರವನ್ನು ಮಂಗಳೂರು ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಪರ್ಕಿಸುವ ಈ ರೈಲು, 16 ಬೋಗಿಗಳನ್ನು ಹೊಂದಿದೆ. ನ.15 ರಿಂದ ಕಾರ್ಯಚರಣೆಯನ್ನು ಶುರು ಮಾಡಲಿದೆ. 

ಈ ರೈಲು 670 ಕಿ.ಮೀ ದೂರವನ್ನು 13 ಗಂಟೆ 20 ನಿಮಿಷಗಳಲ್ಲಿ ಕ್ರಮಿಸಲಿದೆ. ಬೆಳಗ್ಗೆ 7:35ಕ್ಕೆ ಯಶವಂತಪುರದಿಂದ ಹೊರಟು ರಾತ್ರಿ 8:55ಕ್ಕೆ ಮಡಗಾಂವ್ ತಲುಪಲಿದೆ. ಬುಧವಾರವನ್ನು ಹೊರತುಪಡಿಸಿ ವಾರದ 6 ದಿನಗಳ ಕಾಲ ಸಂಚರಿಸಲಿದೆ.

ಹಾಸನ, ಸಕಲೇಶಪುರ, ಉಡುಪಿ, ಮುರುಡೇಶ್ವರ, ಗೋಕರ್ಣ ರೋಡ್ ಹಾಗೂ ಕಾರವಾರ ಸೇರಿದಂತೆ ಒಟ್ಟು 12 ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.