Gruhalakshmi: ದಸರಾಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್.. ಗೃಹಲಕ್ಷ್ಮಿ ಹಣ ಬಿಡುಗಡೆ
Gruhalakshmi: ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ರೂ.2482 ಕೋಟಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ಗೃಹಲಕ್ಷ್ಮಿ (Gruhalakshmi) ಯೋಜನೆಯ 33ನೇ ಕಂತಿನ ರೂ.2482 ಕೋಟಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Cm D.K.Shivakumar) ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ (Dinesh Gooligowda) ಪ್ರತಿಕ್ರಿಯೆ ನೀಡಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯದ 1.24 ಕೋಟಿ ಮಹಿಳೆಯರಿಗೆ ಹಣ ತಲುಪಲಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 32 ಕಂತುಗಳಲ್ಲಿ ರೂ.64,000 ಹಣ ತಲುಪಿದೆ. ಸದ್ಯ 33ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಈ ಮೂಲಕ ಪ್ರತಿ ಫಲಾನುಭವಿಗೆ ರೂ.66,000 ತಲುಪಿದಂತಾಗಲಿದೆ ಎಂದರು.
ಈ ಬರದ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ನೀಡಲಿದೆ. ದಸರಾ ಹಬ್ಬದ ವೇಳೆ, ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿರುವ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.