ಕರ್ನಾಟಕ ಹೈಕೋರ್ಟ್‌: SDA ಹುದ್ದೆಗೆ ಅರ್ಜಿ ಆಹ್ವಾನ

Karnataka High Court: ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿಯಿರುವ 20 'ದ್ವಿತೀಯ ದರ್ಜೆ ಸಹಾಯಕ' ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗದೆ.

Aug 14, 2026 - 17:30
Aug 14, 2026 - 18:22
ಕರ್ನಾಟಕ ಹೈಕೋರ್ಟ್‌: SDA ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿಯಿರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗದೆ. 

ವಿದ್ಯಾರ್ಹತೆ: ವಿಜ್ಞಾನ, ಕಲೆ, ವಾಣಿಜ್ಯ, ವ್ಯವಹಾರ ನಿರ್ವಹಣೆ, ಕಂಪ್ಯೂಟರ್ ಅಪ್ಲಿಕೇಷನ್ಸ್ & ವ್ಯವಹಾರ ಆಡಳಿತ ವಿಷಯಗಳಲ್ಲಿ ಸಾಮಾನ್ಯ, ಇತರೆ ಹಿಂದುಳಿದ ವರ್ಗದವರು 55% ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 50% ಅಂಕಗಳೊಂದಿಗೆ 'ಪದವಿ' ಪಾಸ್ ಆಗಿರಬೇಕು. 

ವಯೋಮಿತಿ: ಕನಿಷ್ಠ 18 ವರ್ಷವಾಗಿರಬೇಕು ಗರಿಷ್ಠ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆ ನೀಡಲಾಗಿದೆ. ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ. 

ಅರ್ಜಿ ಶುಲ್ಕ: ಸಾಮಾನ್ಯ ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿಯವರಿಗೆ ರೂ.350 ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.200 ಶುಲ್ಕವಿದೆ. 

ಪರೀಕ್ಷಾ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಸಲ್ಲಿಸಲು ಕಡೆ ದಿನ: ಸೆ.11ಕ್ಕೆ ಕೊನೆಯಾಗುತ್ತದೆ. ಹೆಚ್ಚಿನ ಮಾಹಿತಿಗೆ https://judiciary.karnataka.gov.in/recsubnotifyಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.