ರಾಜ್ಯ ತೋಟಗಾರಿಕೆ ಇಲಾಖೆಯಲ್ಲಿ ನೇಮಕಾತಿ.. ವಿವಿಧ ಹುದ್ದೆಗೆ ಅರ್ಜಿ

Karnataka Horticulture Department Recruitment 2026: ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪರ್ವ ಆರಂಭಗೊಂಡಿದ್ದು, ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Aug 7, 2026 - 15:07
ರಾಜ್ಯ ತೋಟಗಾರಿಕೆ ಇಲಾಖೆಯಲ್ಲಿ ನೇಮಕಾತಿ.. ವಿವಿಧ ಹುದ್ದೆಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಪರ್ವ ಆರಂಭಗೊಂಡಿದ್ದು, ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಸಹಾಯಕ ತೋಟಗಾರಿಕೆ ಅಧಿಕಾರಿ (Assistant Horticulture Officer) ಹಾಗೂ ಸಹಾಯಕ ತೋಟಗಾರಿಕೆ ನಿರ್ದೇಶಕ (Assistant Director of Horticulture) ಹುದ್ದೆಗಳನ್ನು ತುಂಬಲಾಗುತ್ತದೆ. 

ವಿದ್ಯಾರ್ಹತೆ: ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ತೋಟಗಾರಿಕೆ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. 

ವಯೋಮಿತಿ: ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ಒಬಿಸಿಯವರಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ: ಸಹಾಯಕ ತೋಟಗಾರಿಕೆ ಅಧಿಕಾರಿಗೆ ರೂ.65,950 ರಿಂದ ರೂ.1,24,900 ಹಾಗೂ ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ರೂ.69,250 ರಿಂದ ರೂ.1,34,200 ಸಂಬಳವಿದೆ.

ಅರ್ಜಿ ಶುಲ್ಕ: ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಪ್ರವರ್ಗ-1, ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನರಿಗೆ ರೂ.250 ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಸಲು ಕಡೆ ದಿನ: ಆಗಸ್ಟ್ 30 ಕೊನೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.