ಮರೆಯಬೇಡಿ: ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

Karnataka Horticulture Department Recruitment-2026: ರಾಜ್ಯ ಸರ್ಕಾರವು ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 30 ಕಡೆ ದಿನಾಂಕವಾಗಿದೆ.

Aug 21, 2026 - 15:35
ಮರೆಯಬೇಡಿ: ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ

ಬೆಂಗಳೂರು: ರಾಜ್ಯ ಸರ್ಕಾರವು ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕ ಹುದ್ದೆಗಳನ್ನು ತುಂಬಲಾಗುತ್ತದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮ್ಯಾನತೆ ಪಡೆದ ವಿವಿಯಿಂದ ತೋಟಗಾರಿಕೆ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. 

ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ಒಬಿಸಿಯವರಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.

ಮಾಸಿಕ ಸಹಾಯಕ ತೋಟಗಾರಿಕೆ ಅಧಿಕಾರಿಗೆ ರೂ.65,950 ರಿಂದ ರೂ.1,24,900 ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ರೂ.69,250 ರಿಂದ ರೂ.1,34,200 ವರೆಗೆ ವೇತನವಿದೆ. 

ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಪ್ರವರ್ಗ-1, ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನರಿಗೆ ರೂ.250 ಅರ್ಜಿ ಶುಲ್ಕವಿದೆ. 

ಅರ್ಜಿ ಸಲ್ಲಿಸಲು ಆಗಸ್ಟ್ 30 ಕಡೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/indexnewಗೆ ಸಂಪರ್ಕಿಸಿರಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.