Karnataka: ಭೂಮಾಪಕ & ಗ್ರಾಮ ಆಡಳಿತಾಧಿಕಾರಿ ಹುದ್ದೆ.. ಪ್ರವೇಶ ಪತ್ರ ಬಿಡುಗಡೆ
Karnataka: ಭೂಮಾಪಕರು & ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಲಾಗಿದೆ.
ಬೆಂಗಳೂರು: ಭೂಮಾಪಕರು & ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕ್ರಮವಾಗಿ ಅ.2 ಮತ್ತು 4 ರಂದು ಉಳಿಕೆ ಮೂಲ ವೃಂದದವರಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಂಕ್ ಬಿಡುಗಡೆಗೊಳಿಸಿದೆ.
ಭೂಮಾಪಕತರ ಹುದ್ದೆಗೆ 92,701 ಮತ್ತು ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರದ ಮಾಹಿತಿಯನ್ನು ನೋಡಿ, ಆ ಪ್ರಕಾರ ಪರೀಕ್ಷೆಗೆ ಹಾಜರಾಗಲು ಕೆಇಎ ಸೂಚಿಸಿದೆ.
ಕಂದಾಯ ಇಲಾಖೆಯಲ್ಲಿ ಖಾಲಿಯಿರುವ 750 ಭೂಮಾಪಕರು ಹಾಗೂ 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಈಚೆಗೆ ಅರ್ಜಿ ಆಹ್ವಾನಿಸಲಾಗಿತ್ತು.
ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/indexnewಗೆ ಸಂಪರ್ಕಿಸಿರಿ.