ISRO: ಇಸ್ರೋಗೆ ಭೇಟಿ ನೀಡಿದ ಸಚಿವ ಡಾ.ಅಜಯ್ ಧರಂ ಸಿಂಗ್

ISRO: ಇತ್ತೀಚೆಗೆ 'ಜಿಎಸ್ಎಲ್‌ವಿ-ಎಫ್17' ರಾಕೆಟ್ ಯಶಸ್ವಿ ಉಡಾವಣೆಯಾಗಿದೆ. ಈ ಹಿನ್ನೆಲೆ ವಿಜ್ಞಾನ & ತಂತ್ರಜ್ಞಾನ ಸಚಿವ ಡಾ.ಅಜಯ್ ಧರಂ ಸಿಂಗ್ ಅವರು, ಇಂದು ಇಸ್ರೋ ಅಧ್ಯಕ್ಷ ಡಾ.ವಿ.ನಾರಾಯಣನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

Sep 8, 2026 - 16:03
ISRO: ಇಸ್ರೋಗೆ ಭೇಟಿ ನೀಡಿದ ಸಚಿವ ಡಾ.ಅಜಯ್ ಧರಂ ಸಿಂಗ್

ಬೆಂಗಳೂರು: ಇತ್ತೀಚೆಗೆ ಜಿಎಸ್ಎಲ್‌ವಿ-ಎಫ್17 (GSLV-F17) ರಾಕೆಟ್ ಯಶಸ್ವಿ ಉಡಾವಣೆಯಾಗಿದೆ. ಈ ಹಿನ್ನೆಲೆ ವಿಜ್ಞಾನ & ತಂತ್ರಜ್ಞಾನ ಸಚಿವ ಡಾ.ಅಜಯ್ ಧರಂ ಸಿಂಗ್ ಅವರು, ಇಂದು ಇಸ್ರೋ ಅಧ್ಯಕ್ಷ ಡಾ.ವಿ.ನಾರಾಯಣನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

ಇಸ್ರೋದ ವಿಜ್ಞಾನಿಗಳು, ಎಂಜಿನಿಯರ್‌ಗಳು ಹಾಗೂ ತಾಂತ್ರಿಕ ತಂಡದ ಸಾಧನೆಯನ್ನು ಶ್ಲಾಘಿಸಿದ ಸಚಿವರು, ಈ ಯಶಸ್ಸು ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ಹೇಳಿದರು.

'ಇಸ್ರೋದ ಸಾಧನೆ ದೇಶ ಹಾಗೂ ರಾಜ್ಯಕ್ಕೆ ಹೆಮ್ಮೆಯಾಗಿದೆ. ಬಾಹ್ಯಾಕಾಶ ವಿಜ್ಞಾನ, ಸಂಶೋಧನೆ, ಸ್ಪೇಸ್‌ಟೆಕ್, ಡೀಪ್-ಟೆಕ್, ಸ್ಟಾರ್ಟ್‌ಅಪ್‌ಗಳು ಮತ್ತು ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಅಗತ್ಯವಿರುವ ಎಲ್ಲ ಸಹಕಾರ ನೀಡಲಿದೆ' ಎಂದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಂದ ಇಸ್ರೋ ಅಧ್ಯಕ್ಷರಿಗೆ ಅಭಿನಂದನೆ:

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ದೂರವಾಣಿ ಮೂಲಕ ಇಸ್ರೋ ಅಧ್ಯಕ್ಷ ಡಾ.ವಿ.ನಾರಾಯಣನ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಯಶಸ್ವಿ ಉಡಾವಣೆಗಾಗಿ ಇಸ್ರೋ ಅಧ್ಯಕ್ಷರು ಮತ್ತು ಅವರ ಇಡೀ ತಂಡವನ್ನು ಅಭಿನಂದಿಸಿದರು.

ಇಸ್ರೋ ಹಾಗೂ ಕರ್ನಾಟಕ ಸರ್ಕಾರದ ನಡುವಿನ ವಿಜ್ಞಾನ - ತಂತ್ರಜ್ಞಾನ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಈ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ಆಯೋಜಿಸುವುದಾಗಿ ಸಚಿವರು ತಿಳಿಸಿದರು.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.