Karnataka Police: 3,991 ಕಾನ್‌ಸ್ಟೇಬಲ್‌ ನೇಮಕಾತಿ.. ಶುಕ್ರವಾರ ಕಡೆ ದಿನ

Karnataka Police Civil Constable Job July 3 Last Date Details: ಕರ್ನಾಟಕ ಪೊಲೀಸ್ ಇಲಾಖೆ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 3,991 ಪೊಲೀಸ್‌ ಕಾನ್‌ಸ್ಟೇಬಲ್‌ (ಸಿವಿಲ್‌) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

Jul 1, 2026 - 14:48
Jul 1, 2026 - 14:50
Karnataka Police: 3,991 ಕಾನ್‌ಸ್ಟೇಬಲ್‌ ನೇಮಕಾತಿ.. ಶುಕ್ರವಾರ ಕಡೆ ದಿನ

ಕರ್ನಾಟಕ ಪೊಲೀಸ್ ಇಲಾಖೆ (Karnataka Police Department), ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 3,991 ಪೊಲೀಸ್‌ ಕಾನ್‌ಸ್ಟೇಬಲ್‌ (ಸಿವಿಲ್‌) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಶುಕ್ರವಾರದವರೆಗೆ (ಜುಲೈ 3) ಅವಕಾಶವಿದೆ.

ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority - KEA),  ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವರು ಅರ್ಜಿ ಹಾಕಬಹುದು. 

ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ ವಯೋಮಿತಿಯಿದೆ. ನಿಯಮಾನುಸಾರ ಸಡಿಲಿಯನ್ನು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 35 ವರ್ಷದವರೆಗೆ ಅವಕಾಶವಿದೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿಪಡಿಲಾಗಿದೆ.

ನೇರ ನೇಮಕಾತಿ ಮೂಲಕ ಆಯ್ಕೆಯಾದ ಅಭ್ಯರ್ಥಿಗಳು, ಎರಡೂವರೆ ವರ್ಷ ಖಾಯಂಪೂರ್ವ ಅವಧಿಯಲ್ಲಿರುತ್ತಾರೆ. ಆಯ್ಕೆಯಾದವರಿಗೆ ತಿಂಗಳಿಗೆ ರೂ.37500 ರಿಂದ ರೂ.76100 ವರೆಗೆ ವೇತನ ನೀಡಲಾಗುತ್ತದೆ. 

ಸಾಮಾನ್ಯ, ಇತರೆ ಪ್ರವರ್ಗಗಳ (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು ರೂ.750 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು ರೂ.500 ಪರೀಕ್ಷಾ ಶುಲ್ಕ ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಿರಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.