KEA: 869 ಹುದ್ದೆ.. ಅರ್ಜಿ ಸಲ್ಲಿಕೆ ಶುರು
Karnataka: ಕರ್ನಾಟಕ ಕಾರಾಗೃಹ ಹಾಗೂ ಸುಧಾರಣಾ ಸೇವೆ ಇಲಾಖೆಯೂ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಕಾರಾಗೃಹ ಹಾಗೂ ಸುಧಾರಣಾ ಸೇವೆ ಇಲಾಖೆಯೂ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಒಟ್ಟು ಹುದ್ದೆ: 869 ವಾರ್ಡರ್, ದ್ವಿತೀಯ ದರ್ಜೆ ಬೋಧಕರು ಮತ್ತು ಜೈಲರ್ ಹುದ್ದೆಗಳನ್ನು ತುಂಬಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಯಲಿದೆ.
ಶಿಕ್ಷಣ: ಜೈಲರ್ ಹುದ್ದೆಗೆ ಪದವಿ ಯಾವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಮಾಜಶಾಸ್ತ್ರ, ಮನಃಶಾಸ್ತ್ರ, ಅಪರಾಧಶಾಸ್ತ್ರ ವಿಷಯಗಳಲ್ಲಿ ಪದವಿ ಪೂರೈಸಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ವಾರ್ಡರ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ದ್ವಿತೀಯ ದರ್ಜೆ ಬೋಧಕರು ಹುದ್ದೆಗೂ ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೊಮಾವನ್ನು ಪಡೆದಿರಬೇಕು.
ವಯೋಮಿತಿ: ಸಾಮಾನ್ಯ ವರ್ಗದವರಿಗೆ 31 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ: ಜೈಲರ್ ಹುದ್ದೆಗೆ ರೂ.61,300 ರಿಂದ ರೂ.1,12,900 ಮತ್ತು ವಾರ್ಡರ್ & ದ್ವಿತೀಯ ದರ್ಜೆ ಬೋಧಕ ಹುದ್ದೆಗೆ ರೂ.37,500 ರಿಂದ ರೂ.76100 ವರೆಗೆ ವೇತನವಿದೆ.
ಅರ್ಜಿ ಶುಲ್ಕ: ಸಾಮಾನ್ಯ, ಇತರೆ ಪ್ರವರ್ಗಗಳ (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು ರೂ.750 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು ರೂ.500 ಪರೀಕ್ಷಾ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕಡೆ ದಿನ: ಅ.15ಕ್ಕೆ ಕೊನೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ https://www.cetonline.karnataka.gov.in/kea/indexnewಗೆ ಸಂಪರ್ಕಿಸಬಹುದು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.