Karnataka Rain: ಕರ್ನಾಟಕದಲ್ಲಿ ಮಳೆ.. ಈ ಜಿಲ್ಲೆಗಳಲ್ಲಿ ರಜೆ ಘೋಷಣೆ

Karnataka Rain: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಮತ್ತೆ ಆರ್ಭಟಿಸುತ್ತಿದ್ದು, ಇಂದಿನಿಂದ ಮಂಗಳವರವರೆಗೆ ಮಳೆಯಾಗುವ ಸಾಧ್ಯತೆಯಿದೆ.

Jul 25, 2026 - 08:45
Karnataka Rain: ಕರ್ನಾಟಕದಲ್ಲಿ ಮಳೆ.. ಈ ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಮತ್ತೆ ಆರ್ಭಟಿಸುತ್ತಿದ್ದು, ಇಂದಿನಿಂದ (ಜುಲೈ 25) ಮಂಗಳವರವರೆಗೆ (ಜುಲೈ 28) ಮಳೆಯಾಗುವ ನಿರೀಕ್ಷೆಯಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಹೀಗಾಗಿ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಈ ಜಿಲ್ಲೆಯಲ್ಲಿ ರಜೆ ಘೋಷಣೆ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಅಲ್ಲಿನ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 

ಬೆಂಗಳೂರಿನಲ್ಲಿಂದು ಗರಿಷ್ಠ 30 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.