Karnataka Rain: ರಾಜ್ಯದಲ್ಲಿ ಇಂದು ಸಾಧಾರಣ ಮಳೆ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು (ಸೋಮವಾರ) ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aug 10, 2026 - 11:04
Aug 10, 2026 - 11:11
Karnataka Rain: ರಾಜ್ಯದಲ್ಲಿ ಇಂದು ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು (ಸೋಮವಾರ) ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. 

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗಲಿದೆ.

ಕೇರಳದಲ್ಲೂ ಸಾಧಾರಣ ಮಳೆ:

ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಿಂದಾಗಿ ಕೇರಳ ರಾಜ್ಯವು ತತ್ತರಿಸಿತ್ತು. ಸದ್ಯ ಅಲ್ಲಿ ಮಳೆ ಕಡಿಮೆಯಾಗಿದೆ. ಇಂದಿನಿಂದ ಯಾವುದೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವುದಿಲ್ಲ. ಗುರುವಾರದವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.