Karnataka Rain: ರಾಜ್ಯದಲ್ಲಿ ಇಂದು ಮಳೆ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು (ಗುರುವಾರ) ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aug 13, 2026 - 10:04
Karnataka Rain: ರಾಜ್ಯದಲ್ಲಿ ಇಂದು ಮಳೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು (ಗುರುವಾರ) ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಹಗುರ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಹಾಗೂ ಯಾದಗಿರಿಯಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. 

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. 

ಕೇರಳದಲ್ಲೂ ಮಳೆ:

ಇಂದು ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.