ರಾಜ್ಯದ ವಿವಿಧ ಭಾಗದಲ್ಲಿ ಮಳೆ.. ಇಲ್ಲಿ ರಜೆ ಘೋಷಣೆ
Rain Alert: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಉ.ಕನ್ನಡ, ದ.ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು & ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಇಂದು (ಶನಿವಾರ) ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು & ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಗದಗ, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 28 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಕನ್ನಡ ಈ ತಾಲೂಕುಗಳಲ್ಲಿ ರಜೆ:
ಭಾರೀ ಮಳೆಯಾಗುತ್ತಿರುವ ಹಿನ್ನಲೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೇರಳದಲ್ಲಿ ಧಾರಾಕಾರ ಮಳೆ: 8 ಜಿಲ್ಲೆಗಳಿಗೆ ರಜೆ:
ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕೋಝಿಕ್ಕೋಡ್, ಕಾಸರಗೋಡು, ತ್ರಿಶೂರ್, ಕಣ್ಣೂರು, ವಯನಾಡು, ಕೊಟ್ಟಾಯಂ, ಪತ್ತನಂತಿಟ್ಟ ಹಾಗೂ ಆಲಪ್ಪುಳ ಜಿಲ್ಲೆಯ ಶಿಕ್ಷಣ-ಸಂಸ್ಥೆಗಳಿಗೆ ರಜೆ ನೀಡಲಾಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.