Karnataka Rain Update: ರಾಜ್ಯದಲ್ಲಿ ಇಂದು ಭಾರೀ ಮಳೆ
Karnataka Rain Update: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು (ಭಾನುವಾರ) ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಹಾಗೂ ಬಳ್ಳಾರಿದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ ಲಘು ಮಳೆಯಾಗುವ ನಿರೀಕ್ಷೆಯಿದೆ.
ಕೇರಳದಲ್ಲೂ ಧಾರಾಕಾರ ಮಳೆ:
ಇಲ್ಲಿಯೂ ಮಳೆಯಲ್ಲಿದೆ. ಆಲಪ್ಪುಳ, ಪಟ್ಟಣಂತಿಟ್ಟ, ಕೊಟ್ಟಾಯಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್ ಹಾಗೂ ಮಲಪ್ಪುರಂನಲ್ಲಿ ಯೆಲ್ಲೊ ಅಲರ್ಟ್ ನೀಡಲಾಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.