Karnataka Rain: ರಾಜ್ಯದಲ್ಲಿ ಮಳೆ.. ಈ ಜಿಲ್ಲೆಗಳಲ್ಲಿ ರಜೆ ಘೋಷಣೆ

Karnataka Rain: ರಾಜ್ಯದಲ್ಲಿ ನಿಧಾನವಾಗಿ ವರುಣಾರ್ಭಟ ಪ್ರಾರಂಭವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಇಂದು (ಜು.24) ಮತ್ತು ನಾಳೆ (25) ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

Jul 24, 2026 - 10:06
Karnataka Rain: ರಾಜ್ಯದಲ್ಲಿ ಮಳೆ.. ಈ ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ವರುಣಾರ್ಭಟ ಪ್ರಾರಂಭವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಇಂದು (ಜು.24) ಮತ್ತು ನಾಳೆ (25) ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ:

ವಿಪರೀತ ಮಳೆಯ ಹಿನ್ನೆಲೆ, ಈ ದಿನ ದಕ್ಷಿಣ ಕನ್ನಡದ ಎಲ್ಲ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಜೋಯಿಡಾ, ದಾಂಡೇಲಿ ಮತ್ತು ಶಿರಸಿ ತಾಲೂಕಿನಾದ್ಯಂತ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಬೆಂಗಳೂರಿನಲ್ಲಿ ಸಾಧಾರಣ ಮಳೆ:

ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಠ 30 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ನೀರಿಕ್ಷೆಯಿದೆ. ಜುಲೈ 29 ರವರೆಗೆ ಲಘು ಮಳೆ ಮುಂದುವರಿಯಲಿದೆ.