Karnataka Rain: ಇಂದಿನಿಂದ ಅ.1 ರವರೆಗೆ ಮಳೆ.. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಅ.1 ರವರೆಗೆ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಹಾವೇರಿ ಹಾಗೂ ಗದಗದಲ್ಲೂ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ.