ರೂ.29,679 ಕೋಟಿ ಹೂಡಿಕೆ ಯೋಜನೆಗಳಿಗೆ ಅಸ್ತು

Karnataka: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು ರೂ.29,679 ಕೋಟಿ ಬಂಡವಾಳ ಹೂಡಿಕೆಯ 9 ಹೊಸ & ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ, ನಡೆದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯು ಒಪ್ಪಿಗೆ ನೀಡಿದೆ.

Sep 3, 2026 - 12:30
ರೂ.29,679 ಕೋಟಿ ಹೂಡಿಕೆ ಯೋಜನೆಗಳಿಗೆ ಅಸ್ತು

ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು ರೂ.29,679 ಕೋಟಿ ಬಂಡವಾಳ ಹೂಡಿಕೆಯ 9 ಹೊಸ & ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ, ನಡೆದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಯೋಜನೆಗಳಿಂದ 66,360 ಉದ್ಯೋಗಗಳು ಸೃಷ್ಟಿಯಾಗಲಿವೆ.

ಹೊಸ ಹೂಡಿಕೆ ಯೋಜನೆಗಳ ಅಡಿಯಲ್ಲಿ ವೈಬ್ರನ್ಸಿ ರೆನ್ಯೂಅಬಲ್ ಎನರ್ಜೀಸ್ ರೂ.2,194.94 ಕೋಟಿ ಹೂಡಲಿದ್ದು, 30 ಸಾವಿರ ಜನರಿಗೆ ಉದ್ಯೋಗ ನೀಡಲಿದೆ. ಹಾಗೆಯೇ ಮಹೀಂದ್ರಾ ಏರೋಸ್ಟ್ರಕ್ಚರ್ಸ್ ರೂ.2,300 ಕೋಟಿ (3,000 ಉದ್ಯೋಗ), ಏಕಸ್ ಕನ್ಸೂಮರ್ ಪ್ರಾಡಕ್ಟ್ಸ್ ರೂ.1,104 ಕೋಟಿ (4,813 ಉದ್ಯೋಗ), ಹೀರೋ ಫ್ಯೂಚರ್ ಎನರ್ಜೀಸ್ ರೂ.9,760 ಕೋಟಿ (3,200 ಉದ್ಯೋಗ), ಎಪ್ಸಿಲಾನ್ ರೂ.1,500 ಕೋಟಿ, ಟೊಯೋಟಾ ಕಿರ್ಲೋಸ್ಕರ್ ರೂ.1,200 ಕೋಟಿ, ನಿರಾಣಿ ಶುಗರ್ಸ್ ರೂ.4,062 ಕೋಟಿ, ಟ್ರೂಆಲ್ಟ್ ಬಯೋ ಎನರ್ಜಿ ರೂ.2,988 ಕೋಟಿ ಹಾಗೂ ಲೈಟ್ವಹೌಸ್ ಆಲ್ಟರ್ನೇಟಿವ್ ಅಸೆಟ್ಸ್ ರೂ.600 ಕೋಟಿ ರೂಪಾಯಿ ಬಂಡವಾಳ ಹಾಕಲಿದೆ.

ಎಂಎಸ್‌ಪಿಎಲ್ ಕಂಪನಿಯು ರೂ.884.25 ಕೋಟಿ, ಎನ್ಶೂರ್ ರಿಲಯನ್ಸ್ ಪವರ್ ಸೊಲ್ಯೂಷನ್ಸ್ ರೂ.250 ಕೋಟಿ, ಹೋಂಡಾ ಕಾರ್ಸ್ ರೂ.437 ಕೋಟಿ, ಭೀಮಾ ಫೈನ್ ಕೆಮಿಕಲ್ಸ್ ರೂ.605 ಕೋಟಿ, ಸನ್ಸೇರಾ ರೂ.492.24 ಕೋಟಿ, ಟಿವಿಎಸ್ ಮೋಟಾರ್ಸ್ ರೂ.1,050 ಕೋಟಿ ಮತ್ತು ಹ್ಯಾವೆಲ್ಸ್ ಇಂಡಿಯಾ ರೂ.250 ಕೋಟಿ ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲಿವೆ.

ಕೈಗಾರಿಕೆಗಳಿಗೆ ಪರವಾನಿಗೆ ನೀಡುವ ಯೋಜನಾ ವರದಿಗಳನ್ನು ಸರಿಯಾಗಿ ಪರಿಶೀಲಿಸಬೇಕು. ಯೋಜನೆಗೆ ಪರವಾನಿಗೆ ಪೂರ್ವದಲ್ಲಿ ಆಡಿಟ್ ಕಡ್ಡಾಯವಾಗಿ ನಡೆಸಬೇಕು. ಇದಕ್ಕಾಗಿ ಹೊಸ ಆಡಿಟ್ ತಂಡವನ್ನು ರಚಿಸಬೇಕು ಎಂದು ಮುಖ್ಯಮಂತ್ರಿಗಳು, ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕಾ ನೀತಿಯಲ್ಲಿನ ಪ್ರತಿಯೊಂದು ಅಂಶಗಳನ್ನು ಸಮರ್ಪಕವಾಗಿ ಅನುಸರಿಸಬೇಕು. ಕೈಗಾರಿಕೆಗಳ ಸ್ಥಾಪನೆ ಹಾಗೂ ವಿಸ್ತರಣೆಗೆ ಉತ್ತೇಜನ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಪಿ.ಎಂ.ನರೇಂದ್ರ ಸ್ವಾಮಿ,  ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.