Karnataka Weather: ರಾಜ್ಯ ಹವಾಮಾನ ವರದಿ.. ಮಳೆ ಇದ್ಯಾ?
Karnataka Weather Report: ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನದ ನಂತರ, ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನದ ನಂತರ, ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯವಾಗಿರಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಮುಂದುವರಿಯುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ.19 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಮತಾವರಣವಿರಲಿದೆ.
ದೇಶದ ವಿವಿಧ ಭಾಗಗಳಲ್ಲೂ ಮಳೆ ಸಾಧ್ಯತೆ:
ಭಾರತದ ನಾನಾ ಭಾಗಗಳಲ್ಲಿಯೂ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಗುಜರಾತ್, ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಬಹುದು.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪಂಜಾಬ್ ಹಾಗೂ ಪೂರ್ವ ರಾಜಸ್ಥಾನದಲ್ಲಿಯೂ ವ್ಯಾಪಕ ಮಳೆಯಾಗಲಿದೆ. ಈಶಾನ್ಯ ಭಾರತದ ಇತರೆ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.