Karnataka Weather Report: ರಾಜ್ಯದ ಹವಾಮಾನ ವರದಿ.. ಎಲ್ಲಿ ಮಳೆ?
Karnataka Weather Report: ಕರ್ನಾಟಕದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ.
ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯವಾಗಿರಲಿದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಮುಂದುವರಿಯಲಿದೆ.
ಹಾಗೆಯೇ ರಾಜ್ಯದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 20 ಹಾಗೂ 21 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ, ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.