ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Teacher Recruitment: ಶಿಕ್ಷಕರ ನೇಮಕಾತಿ ಹಿನ್ನೆಲೆ, ಸದ್ಯ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಆಯಾ ಜಿಲ್ಲಾ/ ವಿಭಾಗವಾರು ಅಧಿಸೂಚನೆ ಹೊರಡಿಸಿತ್ತು. ಸದ್ಯ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಈಗ ದಿನಾಂಕ ನ.16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದ ಹಿನ್ನೆ, ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರೀಕ್ಷೆಯ ವೇಳಾಪಟ್ಟಿಯನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುತ್ತದೆ. ಗೊಂದಲವಿದ್ದರೆ ಸಹಾಯವಾಣಿ ಸಂಖ್ಯೆಗೆ (080- 22483145/ 22483140/ 9449588020) ಕರೆ ಮಾಡಬಹುದು.
ಹೆಚ್ಚಿನ ಮಾಹಿತಿ: https://schooleducation.karnataka.gov.in/cacell/enಗೆ ಸಂಪರ್ಕಿಸಬಹುದು.