572 ಗ್ರಾಮ ಆಡಳಿತಾಧಿಕಾರಿ ಹುದ್ದೆ.. ಇಂದೇ ಕಡೆ ದಿನ

Karnataka VAO Recruitment-2026: ರಾಜ್ಯ ಸರ್ಕಾರವು 572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಇಂದೇ (ಆ.20) ಅರ್ಜಿ ಸಲ್ಲಿಸಲು ಕಡೆ ದಿನವಾಗಿದೆ.

Aug 20, 2026 - 14:35
572 ಗ್ರಾಮ ಆಡಳಿತಾಧಿಕಾರಿ ಹುದ್ದೆ.. ಇಂದೇ ಕಡೆ ದಿನ

ಬೆಂಗಳೂರು: ರಾಜ್ಯ ಸರ್ಕಾರವು  572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಇಂದೇ (ಆ.20) ಅರ್ಜಿ ಸಲ್ಲಿಸಲು ಕಡೆ ದಿನವಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದಾಗಿದೆ. ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ಒಬಿಸಿಯವರಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.

ಆಯ್ಕೆಯಾದವರಿಗೆ ಮಾಸಿಕ ರೂ.34,100 ರಿಂದ ರೂ.67,600 ವರೆಗೆ ವೇತನವಿದೆ.

ಅರ್ಜಿ ಶುಲ್ಕ ಪಾವತಿಗೆ ಆಗಸ್ಟ್  21 ಕೊನೆ ದಿನಾಂಕವಾಗಿದೆ. ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಪ್ರವರ್ಗ-1, ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ರೂ.500 ಮತ್ತು ವಿಶೇಷ ಚೇತನರಿಗೆ ರೂ.250 ಅರ್ಜಿ ಶುಲ್ಕವಿದೆ.

ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/indexnewಗೆ ಸಂಪರ್ಕಿಸಬಹುದು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.