572 ಗ್ರಾಮ ಆಡಳಿತಾಧಿಕಾರಿ ಹುದ್ದೆ.. ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Karnataka Village Administrative Officer Recruitment 2026: ಕೆಇಎ 572 'ಗ್ರಾಮ ಆಡಳಿತಾಧಿಕಾರಿ' ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ.

Jul 29, 2026 - 15:39
572 ಗ್ರಾಮ ಆಡಳಿತಾಧಿಕಾರಿ ಹುದ್ದೆ.. ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರವು  572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಜುಲೈ 11 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿತ್ತು. ಜುಲೈ 30 ಕಡೆ ದಿನವಾಗಿತ್ತು. ಸದ್ಯ, ಅರ್ಜಿ ಹಾಕುವ ದಿನಾಂಕವನ್ನು ವಿಸ್ತರಿಸಲಾಗಿದೆ.  

ಈ ಬಗ್ಗೆ 'ಎಕ್ಸ್'ನಲ್ಲಿ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪೋಸ್ಟ್ ಮಾಡಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆ ದಿನವಾಗಿದೆ. ಆಗಸ್ಟ್ 10 ರವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. 

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು. ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ.

ಆಯ್ಕೆಯಾದವರಿಗೆ ತಿಂಗಳಿಗೆ ರೂ.34,100 ರಿಂದ ರೂ.67,600 ವರೆಗೆ ವೇತನ ಲಭ್ಯವಾಗಲಿದೆ. ಸಾಮಾನ್ಯ, 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕವಿದೆ. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.