ಮರೆಯಬೇಡಿ: 572 ಗ್ರಾಮ ಆಡಳಿತಾಧಿಕಾರಿ ಹುದ್ದೆ.. ನಾಡಿದ್ದು ಕಡೆ ದಿನ

Karnataka Village Administrative Officer Recruitment 2026: ರಾಜ್ಯ ಸರ್ಕಾರವು 572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 7 ಕಡೆ ದಿನಾಂಕವಾಗಿದ್ದು, ಆಗಸ್ಟ್ 10 ರವರೆಗೆ ಶುಲ್ಕ ಪಾವತಿಗೆ ಅವಕಾಶವಿದೆ.

Aug 5, 2026 - 14:57
ಮರೆಯಬೇಡಿ: 572 ಗ್ರಾಮ ಆಡಳಿತಾಧಿಕಾರಿ ಹುದ್ದೆ.. ನಾಡಿದ್ದು ಕಡೆ ದಿನ

ಬೆಂಗಳೂರು: ರಾಜ್ಯ ಸರ್ಕಾರವು  572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 7 ಕಡೆ ದಿನಾಂಕವಾಗಿದ್ದು, ಆಗಸ್ಟ್ 10 ರವರೆಗೆ ಶುಲ್ಕ ಪಾವತಿಗೆ ಅವಕಾಶವಿದೆ. 

ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು.

ವಯೋಮಿತಿ: ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ.

ವೇತನ: ಆಯ್ಕೆಯಾದವರಿಗೆ ತಿಂಗಳಿಗೆ ರೂ.34,100 ರಿಂದ ರೂ.67,600 ವರೆಗೆ ವೇತನ ಸಿಗುತ್ತದೆ.

ಅರ್ಜಿ ಶುಲ್ಕ: 2ಎ/ 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ರೂ.750, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.500 ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕವಿದೆ. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.