ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ: ಆ.9ಕ್ಕೆ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ತರಬೇತಿ ಕಾರ್ಯಾಗಾರ

VAO Recruitment 2026, Free Training at Vidyamata Academy: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು 'ವಿದ್ಯಾಮಾತಾ ಅಕಾಡೆಮಿ' ಆಗಸ್ಟ್ 9 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.

Jul 23, 2026 - 16:12
Jul 23, 2026 - 16:13
ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ: ಆ.9ಕ್ಕೆ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ತರಬೇತಿ ಕಾರ್ಯಾಗಾರ

​ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ (Vidhyamatha Academy), ಈ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಆಗಸ್ಟ್ 9 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.

ತರಬೇತಿ ಕಾರ್ಯಾಗಾರದ ವಿಶೇಷತೆಗಳೇನು:

​ಪಟ್ಟಣದ ಎಪಿಎಂಸಿ ರಸ್ತೆಯಲ್ಲಿರುವ 'ವಿದ್ಯಾಮಾತಾ ಅಕಾಡೆಮಿ' ಸಭಾಂಗಣದಲ್ಲಿ ಜರುಗುವ ಈ ಉಚಿತ ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸರಳ ವಿಧಾನಗಳು, ಪಠ್ಯಕ್ರಮದ ಸಮಗ್ರ ವಿಶ್ಲೇಷಣೆ, ಸಮಯ ನಿರ್ವಹಣೆ ಮತ್ತು ಯಶಸ್ಸಿನ ತಂತ್ರಗಳ ಕುರಿತು ವಿಷಯ ತಜ್ಞರು ನೇರ ಮಾರ್ಗದರ್ಶನ ನೀಡಲಿದ್ದಾರೆ.

​ಕರಾವಳಿಯಲ್ಲಿ ಉದ್ಯೋಗ ಜಾಗೃತಿಯ ಕ್ರಾಂತಿ - ವಿದ್ಯಾಮಾತಾ ಅಕಾಡೆಮಿಯ ಹೆಜ್ಜೆಯ ಗುರುತು:

​ಕರಾವಳಿ ಭಾಗದ ಗ್ರಾಮೀಣ & ನಗರ ಪ್ರದೇಶದ ಯುವಜನತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಜಾಗೃತಿ ಮೂಡಿಸುವಲ್ಲಿ 'ವಿದ್ಯಾಮಾತಾ ಅಕಾಡೆಮಿ' ವಹಿಸಿದ ಪಾತ್ರ ಅನನ್ಯವಾಗಿದೆ. ಕೇವಲ ತರಬೇತಿ ನೀಡುವುದಕ್ಕಷ್ಟೇ ಸೀಮಿತವಾಗದೆ, ಸರ್ಕಾರಿ ಉದ್ಯೋಗದ ಕನಸು ಕಾಣುವ ಪ್ರತಿಯೊಬ್ಬ ಅಭ್ಯರ್ಥಿಗೂ ಸರಿಯಾದ ದಾರಿ ತೋರಿಸುವ ಕೆಲಸವನ್ನು ಸಂಸ್ಥೆಯು ನಿರಂತರವಾಗಿ ಮಾಡುತ್ತಿದೆ.

​ಸ್ಪರ್ಧಾತ್ಮಕ ಪರೀಕ್ಷೆಗಳ ಜೊತೆಗೆ ಯುವಜನರ ಉದ್ಯೋಗಾರ್ಹತೆ ಹೆಚ್ಚಿಸಲು 'ಖಾಸಗಿ ಉದ್ಯೋಗ ಕೌಶಲ್ಯ ತರಬೇತಿ'ಯನ್ನು ಸಂಯೋಜಿಸಿ, ಕರಾವಳಿ ಭಾಗದಲ್ಲಿ ಅತ್ಯಂತ ವಿಭಿನ್ನ ಮತ್ತು ಮಾದರಿ ಶೈಲಿಯಲ್ಲಿ ಬೆಳೆದು ಬಂದಿರುವ ಹೆಗ್ಗಳಿಕೆ ವಿದ್ಯಾಮಾತಾ ಅಕಾಡೆಮಿಯದ್ದಾಗಿದೆ.

ಸಾಧನೆಯ ಹಾದಿ:

​ಕಳೆದ ಹಲವು ವರ್ಷಗಳಿಂದ ಬ್ಯಾಂಕಿಂಗ್, ಕೆಪಿಎಸ್‌ಸಿ, ಪೊಲೀಸ್ ಹಾಗೂ ರೈಲ್ವೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 'ವಿದ್ಯಾಮಾತಾ ಅಕಾಡೆಮಿ'ಯ ನೂರಾರು ವಿದ್ಯಾರ್ಥಿಗಳು ತರಬೇತಿ ಪಡೆದು, ಸರ್ಕಾರಿ ಹಾಗೂ ಪ್ರತಿಷ್ಠಿತ ಖಾಸಗಿ ವಲಯಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಸಂಸ್ಥೆಯು ಅಭೂತಪೂರ್ವ ಯಶಸ್ಸು ಕಂಡಿದೆ. ಗುಣಮಟ್ಟದ ಬೋಧನೆ, ನುರಿತ ಮಾರ್ಗದರ್ಶಕರು ಮತ್ತು ನಿರಂತರ ಮಾದರಿ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಸಂಸ್ಥೆಯ ಪ್ರಮುಖ ಆದ್ಯತೆಯಾಗಿದೆ.

ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಯ ನಿರೀಕ್ಷೆಯಲ್ಲಿರುವವರೂ ಈ ಉಚಿತ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ನೋಂದಣಿ ಮಾಡುವವರು ಪುತ್ತೂರಿನ ​ಎಪಿಎಂಸಿ ರಸ್ತೆಯಲ್ಲಿರುವ 'ವಿದ್ಯಾಮಾತಾ ಅಕಾಡೆಮಿ' ಕಚೇರಿ ಅಥವಾ ದೂರವಾಣಿ ಸಂಖ್ಯೆ: 8590773486 / 9448527606ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆ ಸಂಬಂಧ ಪೂರ್ತಿ ವಿವರಗಳಿಗಾಗಿ, ಕ್ಲಿಕ್ ಬಟನ್ ಒತ್ತಿರಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.