Karnataka Weather: ರಾಜ್ಯದಲ್ಲಿ ನ.1 ರವರೆಗೆ ಹಗುರ ಮಳೆ

Karnataka Weather: ಇಂದಿನಿಂದ (ಅ.29) ನ.1 ರವರೆಗೆ ಕಲ್ಯಾಣ ಕರ್ನಾಟಕ, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

Oct 29, 2026 - 11:31
Karnataka Weather: ರಾಜ್ಯದಲ್ಲಿ ನ.1 ರವರೆಗೆ ಹಗುರ ಮಳೆ

ಬೆಂಗಳೂರು: ಅರ್ನಬ್‌ ಚಂಡಮಾರುತ ಪ್ರಭಾವದಿಂದ ಇಂದಿನಿಂದ (ಅ.29) ನ.1 ರವರೆಗೆ ಕಲ್ಯಾಣ ಕರ್ನಾಟಕ, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. 

ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ವಾಡಿಕೆಗಿಂತ ಹೆಚ್ಚಾಗುವ ಸಂಭವವಿದೆ. ಉಳಿದ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಯ ಮಟ್ಟದಲ್ಲಿರಲಿದೆ. ನವೆಂಬರ್ 2 ರಿಂದ  ಕರ್ನಾಟಕದಾದ್ಯಂತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 30 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಶುಭ್ರವಾದ ಆಕಾಶವಿರಲಿದೆ. ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ವಾತನವರವಿರುವ ನಿರೀಕ್ಷೆಯಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.