Karnataka Weather: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಮುಂದುವರಿಕೆ
Karnataka Weather: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಮುಂದುವರಿಯಲಿದೆ.
ಬೆಂಗಳೂರು: ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಗರಿಷ್ಟ ಮತ್ತು ಕನಿಷ್ಠ ಉಷ್ಣಾಂಶ ಸಾಮಾನ್ಯವಾಗಿ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ಸಂಭವವಿದೆ.
ಅಕ್ವಾನ್ ಚಂಡಮಾರುತದ ಪಥವು ಇನ್ನೂ ನಿಗೂಢವಾಗಿದ್ದು, ಮಳೆಯ ಮುನ್ಸೂಚನೆಯು ಚಂಡಮಾರುತದ ಚಲನೆ ಮತ್ತು ಅದರ ಪಥವನ್ನು ಅವಲಂಬಿಸಿರುತ್ತದೆ.
ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಚಂಡಮಾರುತದ ಚಲನೆ ಮತ್ತು ಪಥವನ್ನು ಆಧರಿಸಿ, ನವೆಂಬರ್ 21 ಹಾಗೂ 22ರ ಅವಧಿಯಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 25 ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡು ಭಾಗದ ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲಿ ಶುಭ್ರ ಆಕಾಶವಿರಲಿದೆ.