Karnataka Weather: ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ.21 ರಿಂದ 24 ರವರೆಗೆ ಮಳೆ.. ಯೆಲ್ಲೋ ಅಲರ್ಟ್
Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ.21 ರಿಂದ 24 ರವರೆಗೆ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ.21 ರಿಂದ 24 ರವರೆಗೆ ಒಂದೆರಡು ಕಡೆಗಳಲ್ಲಿ ಭಾರೀ (64.5 ಎಂಎಂ - 115.5 ಎಂಎಂ) ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಅ.19 ರಿಂದ 23 ರವರೆಗೆ ಕೆಲವಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅ.19, 22 ಮತ್ತು 23 ರಂದು ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಂಭವವಿದೆ.
ಹಾಗೆಯೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಅ.19 ಮತ್ತು 20 ರಂದು ಕೆಲವಡೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ.
ದಕ್ಷಿಣದ ರಾಜ್ಯಗಳಲ್ಲಿ ಮಳೆ:
ಅ.24 ರವರೆಗೆ ಕೇರಳ, ಮಾಹೆ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.