ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಆಗಾಗ ಬಿಸಿಲು ಕಾಣಿಸಿಕೊಳ್ಳಲಿದೆ.
ರಾಜ್ಯದ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಮತ್ತು ಮಂಜು ಆವರಿಸುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 31 ಮತ್ತು 23 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾರೀ ಮಳೆ ಅಥವಾ ಗುಡುಗು-ಮಿಂಚು ಸಹಿತ ಮಳೆಯಾಗುವ ಸಂಭವವಿದೆ.
ಆಂಧ್ರಕ್ಕೆ ಅಪ್ಪಳಿಸಿದ ಮುರಸು ಚಂಡಮಾರುತ:
ಆಂಧ್ರ ಪ್ರದೇಶಕ್ಕೆ ಕರಾವಳಿ ತೀರಕ್ಕೆ ಮುರಸು ಚಂಡಮಾರುತ ಅಪ್ಪಳಿಸಿದೆ. ಭಾರೀ ಮಳೆಯಾಗಿದ್ದು, ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸಿದೆ. ಮುಂದಿನ 12 ಗಂಟೆಗಳಲ್ಲಿ ದಕ್ಷಿಣ ಕರಾವಳಿ ಆಂಧ್ರ ಪ್ರದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.