Karnataka Weather: ರಾಜ್ಯದ ವಿವಿಧೆಡೆ ಸಾಧಾರಣ ಮಳೆ

Karnataka Weather: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Nov 5, 2026 - 09:30
Karnataka Weather: ರಾಜ್ಯದ ವಿವಿಧೆಡೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆಯಿರುವ ನಿರೀಕ್ಷೆಯಿದ್ದು, ಬಿಸಿಲು ಮತ್ತು ಸೆಕೆಯ ವಾತಾವರಣ ಮುಂದುವರಿಯಲಿದೆ. 

ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಹಾಗೂ ಕನಿಷ್ಠ  23ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕಲಬುರಗಿ, ವಿಜಯಪುರ ಮತ್ತು ರಾಯಚೂರಿನಲ್ಲಿ ಭಾಗಶಃ ಮೋಡ ಕವಿದ ಆಕಾಶವಿರಲಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.