Karnataka Weather: ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ
Karnataka Weather: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
Karnataka Weather: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆಯಿರುವ ಸಂಭವವಿದೆ. ಬಿಸಿಲು ಮತ್ತು ಸೆಕೆಯ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ಆಕಾಶದೊಂದಿಗೆ ಸಾಧಾರಣ ಮಳೆಯಾಗಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯವಾಗಿ ಮೋಡ ಕವಿದ ಆಕಾಶ ಮತ್ತು ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.