Karnataka Weather: ರಾಜ್ಯದಾದ್ಯಂತ ಇಂದು ಬಿಸಿಲಿನ ವಾತಾವರಣ.. ಅಲ್ಲಲ್ಲಿ ಹಗುರ ಮಳೆ

Karnataka Weather: ರಾಜ್ಯದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯಲಿದೆ. ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Nov 7, 2026 - 11:08
Karnataka Weather: ರಾಜ್ಯದಾದ್ಯಂತ ಇಂದು ಬಿಸಿಲಿನ ವಾತಾವರಣ.. ಅಲ್ಲಲ್ಲಿ ಹಗುರ ಮಳೆ

ಬೆಂಗಳೂರು: ರಾಜ್ಯದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆಗಾಗ ಮೋಡ ಕವಿಯುವ ಸಾಧ್ಯತೆಯಿದೆ. 

ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು ವಾಡಿಕೆಯ ಮಟ್ಟದಿಂದ ವಾಡಿಕೆಗಿಂತ ಹೆಚ್ಚಾಗಿರುವ ಸಂಭವವಿದೆ. 

ಕರಾವಳಿ ಕರ್ನಾಟಕದಲ್ಲಿ ಬಿಸಿಲು ಹೆಚ್ಚಾಗಿದ್ದು, ಬಿಸಿ ವಾತಾವರಣವಿರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. 

ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಮತ್ತು 25 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯವಾಗಿ ಮೋಡ ಕವಿದ ಆಕಾಶದೊಂದಿಗೆ ಹಗುರ ಮಳೆಯಾಗಲಿದೆ. 

ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನಲ್ಲಿ ಭಾಗಶಃ ಮೋಡ ಕವಿದ ಆಕಾಶವಿರಲಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.