Karnataka Weather: ರಾಜ್ಯದಾದ್ಯಂತ ಒಣಹವೆ ಮುಂದುವರಿಕೆ
Karnataka: ರಾಜ್ಯದಾದ್ಯಂತ ಬಹುತೇಕ ಭಾಗಗಳಲ್ಲಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದಾದ್ಯಂತ ಬಹುತೇಕ ಭಾಗಗಳಲ್ಲಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು ವಾಡಿಕೆಯ ಮಟ್ಟದಿಂದ ವಾಡಿಕೆಗಿಂತ ಹೆಚ್ಚಾಗಿರುವ ಸಂಭವವಿದೆ.
ಕನಿಷ್ಠ ಉಷ್ಣಾಂಶ ಸಾಮಾನ್ಯ ಹಾಗೂ ಸಾಮಾನ್ಯಕಿಂತ ಕಮ್ಮಿ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಮತ್ತು 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನಲ್ಲಿ ಶುಭ್ರ ಆಕಾಶವಿರಲಿದೆ.