ರಾಜ್ಯದಾದ್ಯಂತ ಒಣಹವೆ ಮುಂದುವರಿಕೆ: ಕೊಡಗಿನಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್!
Karnataka Weather: ರಾಜ್ಯದಾದ್ಯಂತ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದಾದ್ಯಂತ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಆಗಾಗ ಕೆಲವು ಪ್ರದೇಶಗಳಲ್ಲಿ ಮೋಡ ಕವಿಯುವ ಸಾಧ್ಯತೆಯಿದೆ.
ಗರಿಷ್ಠ ಉಷ್ಣಾಂಶವು ವಾಡಿಕೆಯ ಮಟ್ಟದಿಂದ ವಾಡಿಕೆಗಿಂತ ಹೆಚ್ಚಾಗಿರುವ ಸಂಭವವಿದೆ. ಕನಿಷ್ಠ ಉಷ್ಣಾಂಶ ಸಾಮಾನ್ಯ ಹಾಗೂ ಸಾಮಾನ್ಯಕಿಂತ ಕಮ್ಮಿ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಉತ್ತರ ಒಳನಾಡಿನ ಕಲಬುರಗಿ ಮತ್ತು ರಾಯಚೂರಿನಲ್ಲಿ ಶುಭ್ರ ಆಕಾಶವಿರಲಿದೆ. ಕೊಡಗಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಮೋಡ ಕವಿದ ಆಕಾಶವಿರಲಿದೆ.