ರಾಜ್ಯದಾದ್ಯಂತ ಇಂದು ಒಣಹವೆ ಮುಂದುವರಿಕೆ: ಕೊಡಗಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲು
Karnataka Weather: ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಆಗಾಗ ಕೆಲವು ಪ್ರದೇಶಗಳಲ್ಲಿ ಮೋಡ ಕವಿಯುವ ಸಾಧ್ಯತೆಯಿದೆ.
ಗರಿಷ್ಠ ತಾಪಮಾನವು ವಾಡಿಕೆಯ ಮಟ್ಟದಿಂದ ವಾಡಿಕೆಗಿಂತ ಹೆಚ್ಚಾಗಿರುವ ಸಂಭವವಿದೆ. ಕನಿಷ್ಠ ಉಷ್ಣಾಂಶ ಸಾಮಾನ್ಯ ಹಾಗೂ ಸಾಮಾನ್ಯಕಿಂತ ಕಮ್ಮಿ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸಿರಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಇಲ್ಲಿಯೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಉತ್ತರ ಒಳನಾಡಿನ ಕಲಬುರಗಿ ಹಾಗೂ ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಕೊಡಗಿನಲ್ಲಿ ಗರಿಷ್ಠ 28 ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ.