ಬೆಂಗಳೂರು: ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಆಗಾಗ ಕೆಲವು ಪ್ರದೇಶಗಳಲ್ಲಿ ಮೋಡ ಕವಿಯುವ ಸಾಧ್ಯತೆಯಿದೆ.
ಗರಿಷ್ಠ ತಾಪಮಾನವು ವಾಡಿಕೆಗಿಂತ ಹೆಚ್ಚಾಗಿರುವ ಸಾಧ್ಯತೆಯಿದೆ. ಕನಿಷ್ಠ ಉಷ್ಣಾಂಶ ಸಾಮಾನ್ಯ ಹಾಗೂ ಸಾಮಾನ್ಯಕಿಂತ ಕಮ್ಮಿ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ನೀರಿಕ್ಷೆಯಿದೆ.
ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಪೂರ್ವ ದಿಕ್ಕಿನಿಂದ ಬೀಸುವ ಮಾರುತಗಳ (Easterly Waves) ಪ್ರಭಾವದಿಂದ ನವೆಂಬರ್ 24 ರಿಂದ 28 ರವರೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಬೆಳಗ್ಗೆ ಮಂಜು ಅಥವಾ ದಟ್ಟ ಮಂಜು ಆವರಿಸಿರಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 34 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಉತ್ತರ ಒಳನಾಡಿನ ವಿಜಯಪುರ, ರಾಯಚೂರು ಹಾಗೂ ಕಲಬುರಗಿಯಲ್ಲಿಯೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಕೊಡಗಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಇಲ್ಲಿಯೂ ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.