ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಅಲ್ಲಲ್ಲಿ ಮಳೆ ಸಾಧ್ಯತೆ
Karnataka Weather: ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಅಲ್ಲಲ್ಲಿ ಮಳೆಯಾಗಬಹುದು.
ಬೆಂಗಳೂರು: ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡು ಭಾಗದಲ್ಲೂ ಅಲ್ಲಲ್ಲಿ ಮಳೆಯಾಗುವ ಸಂಭವವಿದೆ. ರಾಜ್ಯದಂತ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಕಮ್ಮಿ ಇರಲಿದ್ದು, ಮಂಜು ಆವರಿಸುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯ ಮೋಡ ಕವಿದ ಆಕಾಶವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 34 ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಮೋಡ ಕವಿದ ಆಕಾಶದೊಂದಿಗೆ ಹಗುರ ಮಳೆಯಾಗಲಿದೆ.
ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನಲ್ಲಿ ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಕೊಡಗಿನಲ್ಲಿ ಗರಿಷ್ಠ 25 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ಆಕಾಶವಿರಲಿದೆ. ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.