ಬೆಂಗಳೂರು: ಕರ್ನಾಟಕದಾದ್ಯಂತ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದಂತ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಕಮ್ಮಿ ಇರಲಿದ್ದು, ಮಂಜು ಆವರಿಸುವ ಸಂಭವವಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆ ಪ್ರಕಾರ, ನ.28 ರಂದು ಕರ್ನಾಟಕದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 28 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಕರಾವಳಿ ಭಾಗದ ಮಂಗಳೂರಿನಲ್ಲಿ ಗರಿಷ್ಠ 34 ಮತ್ತು ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯ ಮೋಡ ಕವಿದ ಆಕಾಶದೊಂದಿಗೆ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಕೊಡಗಿನಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಮೋಡ ಕವಿದ ಆಕಾವಿರಲಿದೆ. ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.