Karnataka Weather: ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆ
Karnataka Weather: ಕರ್ನಾಟಕದಾದ್ಯಂತ ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದೆ. ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದೆ. ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆಯಿರುವ ನಿರೀಕ್ಷೆಯಿದೆ.
ದಕ್ಷಿಣ ಕರ್ನಾಟಕದಲ್ಲಿ ಆಗಾಗ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಕಂಡುಬರಲಿದೆ. ಉತ್ತರ ಕರ್ನಾಟಕದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಂಭವವಿದೆ.
ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.