Karnataka Weather: ರಾಜ್ಯದಲ್ಲಿ ಮೋಡ ಕವಿದ ವಾತಾವರಣ.. ಅಲ್ಲಲ್ಲಿ ಸಾಧಾರಣ ಮಳೆ
Karnataka Weather: ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಕೆಲವೆಡೆ ಬಿಸಿಲಿನ ವಾತಾವರಣ ಹಾಗೂ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯೂ ಆಗಲಿದೆ.
ದಕ್ಷಿಣ ಒಳನಾಡು ಭಾಗದಲ್ಲಿ ಅಕ್ಟೋಬರ್ 22 ರಿಂದ 26 ರವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆಯಿರಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ 29 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ಆಕಾಶವಿರಲಿದ್ದು, ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮಂಗಳೂರಿನಲ್ಲಿ ಗರಿಷ್ಠ 34 ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಹಾಗೆಯೇ ವಿಜಯಪುರ, ರಾಯಚೂರು ಮತ್ತು ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.