Karnataka Weather: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆ
Karnataka Weather: ಕರ್ನಾಟಕದಾದ್ಯಂತ ಇಂದು ಗುಡುಗು - ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಗುಡುಗು - ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆ ಇರುವ ನಿರೀಕ್ಷೆಯಿದೆ.
ದಕ್ಷಿಣ ಕರ್ನಾಟಕದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಉತ್ತರ ಕರ್ನಾಟಕದಾದ್ಯಂತ ಬಿಸಿಲು ಮತ್ತು ಸೆಕೆಯ ವಾತಾವರಣ ಮುಂದುವರಿಯಲಿದೆ/ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣವಿದೆ. ಒಂದು/ ಎರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 32 ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಮೋಡ ಕವಿದ ವಾತಾವರಣದೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.