Karnataka Weather:ರಾಜ್ಯದ ವಿವಿಧೆಡೆ ಮಳೆ

Karnataka Weather: ಕರ್ನಾಟಕದಾದ್ಯಂತ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

Oct 24, 2026 - 11:07
Karnataka Weather:ರಾಜ್ಯದ ವಿವಿಧೆಡೆ ಮಳೆ

ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.  

ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ  ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆಯಿರುವ ನಿರೀಕ್ಷೆಯಿದೆ. 

ದಕ್ಷಿಣ ಕರ್ನಾಟಕದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರಲಿದೆ. ಉತ್ತರ ಕರ್ನಾಟಕದಾದ್ಯಂತ ಬಿಸಿಲು ಮತ್ತು ಸೆಕೆಯ ವಾತಾವರಣ ಮುಂದುವರಿಯಲಿದೆ. ಹಾಗೆಯೇ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ಸಂಭವವಿದೆ. 

ರಾಜಧಾನಿ ಬೆಂಗಳೂರು ನಗರದಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. 

ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಅಲ್ಲಲ್ಲಿ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.